* * * * * * HASSAN DISTRICT POLICE

Friday, November 10, 2017

PRESS NOTE : 10-11-2017

ಪತ್ರಿಕಾ ಪ್ರಕಟಣೆ            ದಿನಾಂಕ: 09-11-2017.
ಅಕ್ರಮವಾಗಿ ಮರಳು ಸಾಗಿಸುತ್ತಿದ್ದವನ ಬಂಧನ, ಮರಳು ಸಮೇತ ಲಾರಿ ವಶ
            ದಿನಾಂಕ: 09-11-2017 ರಂದು ಬೆಳಿಗ್ಗೆ 5-30 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಶ್ರವಣಬೆಳಗೊಳದ ಸಂತೇ ಮೈದಾನದ ಹತ್ತಿರ ಲಾರಿಯಲ್ಲಿ ಮರಳು ಸಾಗಿಸುತ್ತಿದ್ದಾರೆಂದು ಶ್ರೀ ಹರೀಶ್ಬಾಬು, ಸಿಪಿಐ, ಚನ್ನರಾಯಪಟ್ಟಣ ವೃತ್ತ, ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಕೆಎ-13 ಎ-8395 ರ ಲಾರಿಯನ್ನು ತಡೆದು ತಪಾಸಣೆ ನಡೆಸಲಾಗಿ ಯಾವುದೇ ಪರವಾನಿಗಿಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಕಾರ್ತಿಕ್ ಬಿನ್ ಕೃಷ್ಣೇಗೌಡ, 19 ವರ್ಷ, ಸೀತಾಪುರ ಗ್ರಾಮ, ಚಿನ್ನಕುರಳಿ ಗ್ರಾಮ, ಪಾಂಡವಪುರ ತಾಲ್ಲೂಕು, ಮಂಡ್ಯ ಜಿಲ್ಲೆ ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಲಾರಿ ಸಮೇತ ಮರಳನ್ನು ಅಮಾನತ್ತುಪಡಿಸಿಕೊಂಡು ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಜೂಜಾಡುತ್ತಿದ್ದ 7 ಜನರ ಬಂಧನ, ಬಂಧಿತರಿಂದ ಸುಮಾರು 49,230/- ನಗದು ವಶ:


       ದಿನಾಂಕ: 08-11-2017 ರಂದು ಸಂಜೆ 7-30 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣದ ಕೃತಿಕ ಲಾಡ್ಜ್ ಹಿಂಬಾಗದ ಖಾಲಿ ಜಾಗದಲ್ಲಿ ಅಂದರ್-ಬಾಹರ್ ಜೂಜಾಟಾಡುತ್ತಿದ್ದಾರೆಂದು ಶ್ರೀ ಹರೀಶ್ ಬಾಬು, ಸಿಪಿಐ, ಚನ್ನರಾಯಪಟ್ಟಣ ವೃತ್ತ, ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಜೂಜಾಡುತ್ತಿದ್ದವರನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ 1) ಮಂಜುನಾಥ ಬಿನ್ ದೇವರಾಜ, 32 ವರ್ಷ, ಗಲಸಿಂದ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು 2) ಪ್ರಕಾಶ್ ಬಿನ್ ಗೋವಿಂದೇಗೌಡ, 52 ವರ್ಷ, ದಡದಹಳ್ಳಿ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು 3) ರವಿಕುಮಾರ್ ಬಿನ್ ರಾಮೇಗೌಡ, 35 ವರ್ಷ, ಗೂರನಹಳ್ಳಿ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು 4) ಮೋಹನ ಬಿನ್ ಮೂತರ್ಿ, 29 ವರ್ಷ,  ಬೆಲಸಿಂದ ಗ್ರಾಮ, ಚನ್ನರಾಯಪಟ್ಟಣ ತಾಲ್ಲೂಕು 5) ಮಹೇಶ್ ಬಿನ್ ತಿಮ್ಮೇಗೌಡ, 35 ವರ್ಷ, ಬೆಲಸಿಂದ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು 6) ಅಶ್ವಥ್ ಬಿನ್ ಗೌಡಪ್ಪ, 45 ವರ್ಷ, ಉಲಿವಾಲ ಗ್ರಾಮ, ಕಸಬಾ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು 7) ನಾಗರಾಜು ಬಿನ್ ರಂಗೇಗೌಡ, 42 ವರ್ಷ, ನಂಬಿಹಳ್ಳಿ ಗ್ರಾಮ, ದಂಡಿಗನಹಳ್ಳಿ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು ಎಂದು ತಿಳಿಸಿದ್ದವರನ್ನು ದಸ್ತಗಿರಿ ಮಾಡಿಕೊಂಡು ಜೂಜಾಟದಲ್ಲಿ ಪಣಕ್ಕಿಟ್ಟಿದ್ದ ಸುಮಾರು 49,230/- ನಗದನ್ನು ಅಮಾನತ್ತುಪಡಿಸಿಕೊಂಡು ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

No comments: