* * * * * * HASSAN DISTRICT POLICE

Sunday, December 10, 2017

PRESS NOTE : 10-12-2017

ಪತ್ರಿಕಾ ಪ್ರಕಟಣೆ               ದಿನಾಂಕ: 10-12-2017

ಹೆಂಗಸು ಕಾಣೆ


       ದಿನಾಂಕ: 26-10-2017 ರಂದು ಮಧ್ಯಾಹ್ನ 2-30 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಬಾಗೂರು ಹೋಬಳಿ, ಅದಿಹಳ್ಳಿ ಗ್ರಾಮದ ವಾಸಿ ಶ್ರೀಮತಿ ಸುಚಿತ್ರ, ರವರು ತಿಪಟೂರು ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಸುಚಿತ್ರ, ರವರ ಪತಿ ಶ್ರೀ ನಾಗೇಶ್, ರವರು ಕೊಟ್ಟ ದೂರಿನ ಮೇರೆಗೆ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಸುಚಿತ್ರ ಕೋಂ ನಾಗೇಶ್, 30 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08176-233033 ಕ್ಕೆ ಸಂಪರ್ಕಿಸುವುದು.

No comments: