* * * * * * HASSAN DISTRICT POLICE

Saturday, March 31, 2018

PRESS NOTE : 30-03-2018


                               ಪತ್ರಿಕಾ ಪ್ರಕಟಣೆ             ದಿನಾಂಕ:30-03-2018

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, ಬಂಧಿತನಿಂದ ಸುಮಾರು 1181/- ಬೆಲೆಯ ಮದ್ಯ ವಶ:  ದಿನಾಂಕ: 29-03-2018 ರಂದು ಸಂಜೆ 4-30 ಗಂಟೆಗೆ ಹಾಸನ ತಾಲ್ಲೂಕು, ದುದ್ದ ಹೋಬಳಿ ಕೋರವಂಗಲ ಕಾವಲು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ.ಬೋಜಪ್ಪ, ಪಿಎಸ್ಐ ದುದ್ದ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ರಂಗಯ್ಯ ಬಿನ್ ಕರಿಯಯ್ಯ, 50 ವರ್ಷ, ಕೋರವಂಗಲ ಕಾವಲು, ದುದ್ದ ಹೋಬಳಿ, ಹಾಸನ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 1181/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, ಬಂಧಿತನಿಂದ ಸುಮಾರು 3150/- ಬೆಲೆಯ ಮದ್ಯ ವಶ:  ದಿನಾಂಕ: 29-03-2018 ರಂದು ಮಧ್ಯಾಹ್ನ 2.00 ಗಂಟೆಗೆ ಹಾಸನ ತಾಲ್ಲೂಕು, ಕಟ್ಟಾಯ ಹೋಬಳಿ ಗೂಳೇನಹಳ್ಳಿ ಗ್ರಾಮದ ತಮ್ಮಣ್ಣ ರವರ ಮನೆಯ ಮುಂಭಾಗ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ.ರಮೇಶ್, ಎಎಸ್ಐ ಗೊರೂರು ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ತಮ್ಮಣ್ಣ ಬಿನ್ ನಂಜೇಗೌಡ, 70 ವರ್ಷ, ಗೂಳೇನಹಳ್ಳಿ, ಕಟ್ಟಾಯ ಹೋಬಳಿ, ಹಾಸನ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 3150/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಇಬ್ಬರು ಮಕ್ಕಳೊಂದಿಗೆ ತಾಯಿ ಕಾಣೆ : ದಿನಾಂಕ: 28-03-2018 ರಂದು ಮಧ್ಯಾಹ್ನ 3.30 ಗಂಟೆ ಸಮಯದಲ್ಲಿ ಆಲೂರು ತಾಲ್ಲೂಕ್ ಪಾಳ್ಯ ಹೋಬಳಿ ಹೊನ್ನವಳ್ಳಿ ಗ್ರಾಮದ ಹರೀಶ್ ರವರು ಸಂತೆಗೆಂದು ಹೋಗಿದ್ದು, ವಾಪಸ್ಸು ಮನೆಗೆ ಬಂದು ನೋಡಲಾಗಿ ಮನೆಯಲ್ಲಿ ತನ್ನ ಹೆಂಡತಿ ಶೃತಿ ಮತ್ತು ಮಕ್ಕಳಾದ ಶ್ರೇಯ ಮತ್ತು ಧನುಶ್ರೀ ರವರ ಮನೆಯಲ್ಲಿ ಇಲ್ಲದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಹರೀಶ್ ರವರು ದಿನಾಂಕ: 29-03-2018 ರಂದು ಕೊಟ್ಟ ದೂರಿನ ಮೇರೆಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶೃತಿ ಕೋಂ ಹರೀಶ, 25ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಚೂಡಿಧಾರ ಧರಿಸಿರುತ್ತಾಳೆ.
ಶ್ರೇಯ ಬಿನ್ ಹರೀಶ್, 6ವರ್ಷ, 3.5 ಅಡಿ ಎತ್ತರ ಎಣ್ಣೆಗೆಂಪು ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಫ್ರಾಕ್ ಧರಿಸಿರುತ್ತಾಳೆ.
ಧನುಶ್ರೀ ಬಿನ್ ಹರೀಶ್, 4 ವರ್ಷ, 3.2 ಅಡಿ ಎತ್ತರ ಎಣ್ಣೆಗೆಂಪು ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾಳೆ. ಮನೆಯಿಂದ ಹೋಗುವಾಗ ಹಳದಿ ಬಣ್ಣದ ಫ್ರಾಕ್ ಧರಿಸಿರುತ್ತಾಳೆ. ಇವರುಗಳ ಸುಳಿವು ಸಿಕ್ಕಲ್ಲಿ 08170-218231 ಕ್ಕೆ ಸಂಪರ್ಕಿಸುವುದು.

No comments: