* * * * * * HASSAN DISTRICT POLICE

Saturday, March 31, 2018

PRESS NOTE : 31-03-2018


ಪತ್ರಿಕಾ ಪ್ರಕಟಣೆ             ದಿನಾಂಕ: 31-03-2018
ಬೈಕ್ನ ನಿಯಂತ್ರಣ ತಪ್ಪಿ ಬೈಕ್ ಸಾವರ ಸಾವು :      ದಿನಾಂಕ: 30-03-2018 ರಂದು ಮಧ್ಯಾಹ್ನ 3-30 ಗಂಟೆ ಸಮಯದಲ್ಲಿ ಹಾಸನ ತಾಲ್ಲೂಕು, ದುದ್ದ ಹೋಬಳಿ, ಮೂಲದುದ್ದ ಗ್ರಾಮದ ವಾಸಿ ಶ್ರೀ ರಮೇಶ್@ ರಮೇಶ್ ಬಾಬು ರವರ ಬಾಬ್ತು ಕೆಎ-13, ಇಸಿ-8004 ನೇ ಬಜಾಜ್ ಪಲ್ಸರ್ ಬೈಕ್ನಲ್ಲಿ ದುದ್ದ ಗ್ರಾಮಕ್ಕೆ ಹೋಗಲು ಹಾಸನ ತಾಲ್ಲೂಕು, ದುದ್ದ ಹೋಬಳಿ, ದುದ್ದ ಗ್ರಾಮದ ಸುಮಂತ್ ರವರ ಪೆಯಿಂಟ್ ಅಂಗಡಿ ಮುಂಭಾಗದ ರಸ್ತೆಯಲ್ಲಿ ತನ್ನ ಬೈಕ್ನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ರಸ್ತೆಯಲ್ಲಿದ್ದ ಹಂಪ್ಸ್ನ್ನು ನೆಗೆಸಿದ್ದ ಪರಿಣಾಮ ಶ್ರೀ ರಮೇಶ್@ ರಮೇಶ್ ಬಾಬು, ರವರಿಗೆ ತೀವ್ರ ಸ್ವರೂಪದ ರಕ್ತಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹಾಸನ ಸಕರ್ಾರಿ ಅಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸಲಾಗಿ ಶ್ರೀ ರಮೇಶ್ @ ರಮೇಶ್ ಬಾಬು ಬಿನ್ ಚನ್ನಯ್ಯ, 36 ವರ್ಷ, ಮೂಲದುದ್ದ ಗ್ರಾಮ, ದುದ್ದ ಹೋಬಳಿ, ಹಾಸನ ತಾಲ್ಲೂಕು ರವರು ಮೃತಪಟ್ಟಿರುತ್ತಾರೆಂದು ತಿಳಿಸಿದ ಮೇರೆಗೆ ಮೃತರ ತಮ್ಮ ಶ್ರೀ ಚಂದ್ರಶೇಖರ್, ರವರು ಕೊಟ್ಟ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, ಬಂಧಿತನಿಂದ ಸುಮಾರು 1,688/- ಬೆಲೆಯ ವಶ : ದಿನಾಂಕ: 30-03-2018 ರಂದು ಸಂಜೆ 6-30 ಗಂಟೆ ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಜಾವಗಲ್ ಹೋಬಳಿ, ಮೊಸಳೆ ಗ್ರಾಮದ ಶ್ರೀ ಗೌರಮ್ಮ ದೇಸ್ಥಾನದ ಪಕ್ಕದಲ್ಲಿ ಯಾರೋ ಒಬ್ಬ ವ್ಯಕ್ತಿಯ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ಹೆಚ್.ಡಿ. ಮಂಜು, ಪಿಎಸ್ಐ, ಜಾವಗಲ್ ಪೊಲೀಸ್ ಠಾಣೆ. ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ರಾಜಪ್ಪ ಬಿನ್ ಪುಟ್ಟೇಗೌಡ, 40 ವರ್ಷ, ಮೊಸಳೆಗ್ರಾಮ, ಜಾವಗಲ್ ಹೋಬಳಿ, ಅರಸೀಕೆರೆ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 1,688/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಜಿಲ್ಲೆಯ ಅರಕಲಗೂಡು, ಅರಸೀಕೆರೆ, ಆಲೂರು & ಚನ್ನರಾಯಪಟ್ಟಣ ತಾಲ್ಲೂಕುಗಳ ಹೋಬಳಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ, ಬಂಧಿತರಿಂದ ಸುಮಾರು 19,786/- ಬೆಲೆಯ ಮದ್ಯ ವಶ:
ಪ್ರಕರಣ-01  : ದಿನಾಂಕ: 31-03-2018 ರಂದು ಬೆಳಿಗ್ಗೆ 6-00 ಗಂಟೆ ಸಮಯದಲ್ಲಿ ಅರಕಲಗೂಡು ತಾಲ್ಲೂಕು, ದೊಡ್ಡಮಗ್ಗೆ ಹೋಬಳಿ, ಬೆಳವಾಡಿ ಗ್ರಾಮದ ವಾಸಿ ಶ್ರೀ ಮಲ್ಲೇಶ್, ರವರ ಮನೆಯಲ್ಲಿ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡಿರುತ್ತಾರೆಂದು ಶ್ರೀ ಶಿವಣ್ಣ, ಎಎಸ್ಐ, ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಮನೆಯಲ್ಲಿದ್ದ ಒಬ್ಬ ವ್ಯಕ್ತಿ ಓಡಲು ಯತ್ನಿಸಿದ್ದವನನ್ನು ಸುತ್ತುವರಿದು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಮಲ್ಲೇಶ್ ಬಿನ್ ಅಣ್ಣೇಗೌಡ, 26 ವರ್ಷ, ಬೆಳವಾಡಿ ಗ್ರಾಮ, ದೊಡ್ಡಮಗ್ಗೆ ಹೋಬಳಿ, ಅರಕಲಗೂಡು ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 2, 391/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಪ್ರಕರಣ-02 :  ದಿನಾಂಕ: 30-03-2018 ರಂದು ಸಂಜೆ 4-00 ಗಂಟೆ ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಗಂಡಸಿ ಹೋಬಳಿ, ಆಲದಹಳ್ಳಿ ಗ್ರಾಮದ ವಾಸಿ ಶ್ರೀ ರಾಜಶೇಖರ, ರವರ ಮನೆಯ ಮುಂಭಾಗ ಜಗುಲಿಯ ಮೇಲೆ ಪ್ಲಾಸ್ಟಿಕ್ ಚೀಲದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ಶಬ್ಬೀರ್ ಹುಸೇನ್, ಪಿಎಸ್ಐ, ಗಂಡಸಿ ಪೊಲೀಸ್ ಠಾಣೆ. ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ರಾಜಶೇಖರ ಬಿನ್ ತಿಮ್ಮೇಗೌಡ, 46 ವರ್ಷ, ಆಲದಹಳ್ಳಿ ಗ್ರಾಮ, ಗಂಡಸಿ ಹೋಬಳಿ, ಅರಸೀಕೆರೆ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 1568/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಗಂಡಸಿ ಪೊಲೀಸ್ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

ಪ್ರಕರಣ-03 : ದಿನಾಂಕ: 30-03-2018 ರಂದು ಬೆಳಿಗ್ಗೆ 7-00 ಗಂಟೆ ಸಮಯದಲ್ಲಿ ಆಲೂರು ತಾಲ್ಲೂಕು, ಹೊನ್ನೇನಹಳ್ಳಿ ಕ್ರಾಸ್ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ಬಸವಲಿಂಗಪ್ಪ, ಹೆಚ್ಸಿ 362, ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ರಮೇಶ್ ಬಿನ್ ರಾಜಣ್ಣ, 45 ವರ್ಷ, ಕಿತ್ಬೂರು ಗ್ರಾಮ, ಆಲೂರು ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 10,800/- ನಗದನ್ನು ಅಮಾನತ್ತುಪಡಿಸಿಕೊಂಡು ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಪ್ರಕರಣ-04 : ದಿನಾಂಕ: 30-03-2018 ರಂದು ಮಧ್ಯಾಹ್ನ 1-00 ಗಂಟೆ ಸಮಯದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು, ಗೌಡಗೆರೆ ಅತ್ತಿಹಳ್ಳಿ ರಸ್ತೆ, ಎಂ.ಎಂ.ಬಿ ಇಟ್ಟಿಗೆ ಫ್ಯಾಕ್ಟರಿ ಹತ್ತಿರವಿರುವ ಅಂಗಡಿಯಲ್ಲಿ ಅಕ್ರಮವಾಗಿ ಮದ್ದಯ ಮಾರಾಟ ಮಾಡುತ್ತಿದ್ದಾರೆಂದು ಶ್ರೀ ವಿನೋದರಾಜ್, ಎಸ್.ಪಿ, ಪಿಎಸ್ಐ, ಚನ್ನರಾಯಪಟ್ಟಣ ನಗರ ಠಾಣೆ. ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿ ಶ್ರೀ ಶಿವಕುಮಾರ್ ಬಿನ್ ಚಂದ್ರೇಗೌಡ, 37 ವರ್ಷ, ಅರೆಸೋಮನಹಳ್ಳಿ ಗ್ರಾಮ, ನುಗ್ಗೇಹಳ್ಳಿ ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ ಸುಮಾರು 5,027/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.
ಹೆಂಗಸು ಕಾಣೆ : ದಿನಾಂಕ: 23-03-2018 ರಂದು ಬೆಳಿಗ್ಗೆ 10-00 ಗಂಟೆ ಸಮಯದಲ್ಲಿ ಹೊಳೆನರಸೀಪುರ ತಾಲ್ಲೂಕು, ಹಳ್ಳಿಮೈಸೂರು ಹೋಬಳಿ, ಬಡಕ್ಯಾತನಹಳ್ಳಿ ಗ್ರಾಮದ ವಾಸಿ ಶ್ರೀ ಮಾದೇಶ್, ರವರ ಮಗಳು ಪತ್ನಿ ಶ್ರೀಮತಿ ಶೃತಿ, ಅಂಗನವಾಡಿ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಕೆಲಸಕ್ಕೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ. ಎಲ್ಲಾ ಕಡೆ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ, ಪತ್ತೆಮಾಡಿಕೊಡಬೇಕೆಂದು ಶ್ರೀಮತಿ ಶೃತಿಯ ಪತಿ ಶ್ರೀ ಮಾದೇಶ್, ರವರು ದಿನಾಂಕ: 30-03-2018 ರಂದು ಕೊಟ್ಟ ದೂರಿನ ಮೇರೆಗೆ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಹೆಂಗಸಿನ ಚಹರೆ: ಶ್ರೀಮತಿ ಶೃತಿ ಕೊಂ ಮಾದೇಶ್, 29 ವರ್ಷ, 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ಸಾಧಾರಣಾ ಮೈಕಟ್ಟು, ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ. ಈ ಹೆಂಗಸಿನ ಸುಳಿವು ಸಿಕ್ಕಲ್ಲಿ 08172-223935 ಕ್ಕೆ ಸಂಪರ್ಕಿಸುವುದು.


No comments: