* * * * * * HASSAN DISTRICT POLICE

Thursday, April 19, 2018

PRESS NOTE : 19-04-2018


ಪತ್ರಿಕಾ ಪ್ರಕಟಣೆ                                   ದಿನಾಂಕ:19-04-2018

ವಿವಿಧ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ  ಬಂಧನ, 2049/- ಬೆಲೆಯ ಮದ್ಯ ವಶ

ಪ್ರಕರಣ-1 :- ದಿನಾಂಕ: 18-04-2018 ರಂದು ಬೆಳಗ್ಗೆ 10.30 ಗಂಟೆ ಸಮಯದಲ್ಲಿ ಅರಕಲಗೂಡು ತಾಲ್ಲೂಕ್ ರಾಮನಾಥಪುರ ಹೋಬಳಿ ಮಲ್ಲಾಪುರ ಗ್ರಾಮದ ರವರಿ ರವರು ತಮ್ಮ ಮನೆಯ ಮುಂದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಎಎಸ್ಐ ಶ್ರೀ ವಿರೂಪಾಕ್ಷ, ಕೊಣನೂರು ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮದ್ಯ  ಮಾರಾಟ ಮಾಡುತ್ತಿದ್ದವನ ಹಿಡಿದು ಹೆಸರು ವಿಳಾಸ ಕೇಳಲಾಗಿ ರವಿ ಬಿನ್ ಲೇಟ್ ಚನ್ನಬಸಪ್ಪ, 45ವರ್ಷ, ಮಲ್ಲಾಪುರ ಗ್ರಾಮ, ಅರಕಲಗೂಡು ತಾಲ್ಲೂಕ್ ಎಂದು ತಿಳಿಸಿದವನನ್ನು ದಸ್ತಗಿರಿ ಮಾಡಿಕೊಂಡು ಮದ್ಯ ಮಾರಾಟಕ್ಕಿಟ್ಟಿದ್ದ 1168/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು  ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ತನಿಖೆ ಕ್ರಮ ಕೈಗೊಂಡಿರುತ್ತೆ. 

ಪ್ರಕರಣ-2 :- ದಿನಾಂಕ: 18-04-2018 ರಂದು ಬೆಳಗ್ಗೆ 11.00 ಗಂಟೆ ಸಮಯದಲ್ಲಿ ಸಕಲೇಶಪುರ ತಾಲ್ಲೂಕ್ ಬೆಳಗೊಡ್ ಹೋಬಳಿ ರಕ್ಷಿದಿ ಗ್ರಾಮದ ಪ್ರದೀಪ್ ಎಂಬುವರು ತಮ್ಮ ಅಂಗಡಿಯ ಮುಂದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಪಿಎಸ್ಐ ಶ್ರೀ ಜಗದೀಶ್, ಸಕಲೇಶಪುರ ಗ್ರಾಮಾಂತರ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮದ್ಯ  ಮಾರಾಟ ಮಾಡುತ್ತಿದ್ದವನ ಹಿಡಿದು ಹೆಸರು ವಿಳಾಸ ಕೇಳಲಾಗಿ ಪ್ರದೀಪ ಬಿನ್ ಸುಂದರ, 30ವರ್ಷ, ರಕ್ಷಿದಿ ಗ್ರಾಮ, ಸಕಲೇಶಪುರ ತಾಲ್ಲೂಕ್ ಎಂದು ತಿಳಿಸಿದವನನ್ನು ದಸ್ತಗಿರಿ ಮಾಡಿಕೊಂಡು ಮದ್ಯ ಮಾರಾಟಕ್ಕಿಟ್ಟಿದ್ದ 600/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು  ಸಕಲೇಶಪುರ ಗ್ರಾಮಾಂತರ  ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ತನಿಖೆ ಕ್ರಮ ಕೈಗೊಂಡಿರುತ್ತೆ.

ಪ್ರಕರಣ-3 :- ದಿನಾಂಕ: 18-04-2018 ರಂದು ಸಂಜೆ 6.00 ಗಂಟೆ ಸಮಯದಲ್ಲಿ ಅರಸೀಕೆರೆ ತಾಲ್ಲೂಕ್ ಜಾವಗಲ್-ಹಾರನಹಳ್ಳಿ ರಸ್ತೆಯ ಸಾಮಿಲ್ ಮುಂಭಾಗ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾರೆಂದು ಪಿಎಸ್ಐ ಶ್ರೀ ಮಂಜು, ಜಾವಗಲ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಮದ್ಯ  ಮಾರಾಟ ಮಾಡುತ್ತಿದ್ದವನ ಹಿಡಿದು ಹೆಸರು ವಿಳಾಸ ಕೇಳಲಾಗಿ ಜಯಣ್ಣ ಬಿನ್ ತೊಳಚನಾಯಕ, 48ವರ್ಷ, ದೇಶಾಣಿಗೊಲ್ಲರಹಟ್ಟಿಗ್ರಾಮ, ಅರಸೀಕೆರೆ ತಾಲ್ಲೂಕ್ ಎಂದು ತಿಳಿಸಿದವನನ್ನು ದಸ್ತಗಿರಿ ಮಾಡಿಕೊಂಡು ಮದ್ಯ ಮಾರಾಟಕ್ಕಿಟ್ಟಿದ್ದ 281/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು  ಜಾವಗಲ್  ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ತನಿಖೆ ಕ್ರಮ ಕೈಗೊಂಡಿರುತ್ತೆ.

No comments: