* * * * * * HASSAN DISTRICT POLICE

Saturday, April 17, 2021

ಹಾಸನ ಜಿಲ್ಲಾ ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆ ದಿನಾಂಕ : 17-04-2021

                                       ಪತ್ರಿಕಾ ಪ್ರಕಟಣೆ         ದಿನಾಂಕ:  17-04-2021

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, 2,073/- ಬೆಲೆಯ ಮದ್ಯ ವಶ:

ದಿನಾಂಕ: 16-04-2021 ರಂದು ಮಧ್ಯಾಹ್ನ 12-00 ಗಂಟೆ ಸಮಯದಲ್ಲಿ ಹಾಸನ ತಾಲ್ಲೂಕು, ದುದ್ದ ಹೋಬಳಿ, ಮುತ್ತತ್ತಿ ಗ್ರಾಮದಲ್ಲಿ ಮನೆಯ ಮುಂಭಾಗದ ಕೌಂಪೌಂಡ್ ಬಳಿ ರಸ್ತೆ ಪಕ್ಕದ ಚರಂಡಿಯ ಮೇಲೆ ಹಾಸಿರುವ ಕಲ್ಲಿನ ಮೇಲೆ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಕು|| ಎಂ.ಸಿ. ಮಧು, ಪಿಎಸ್ಐ  ದುದ್ದ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ  ಸ್ಥಳಕ್ಕೆ ಹೋಗಿ ನೋಡಲಾಗಿ ಯಾವುದೇ ಪರವಾನಿಗೆಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನನ್ನು ಹಿಡಿದು ಹೆಸರು ವಿಳಾಸ ಕೇಳಲಾಗಿ ಶ್ರೀ ಜವರೇಗೌಡ ಬಿನ್ ಲೇಟ್ ನಂಜೇಗೌಡ,  60 ವರ್ಷ, ಮುತ್ತತ್ತಿ ಗ್ರಾಮ, ದುದ್ದ ಹೋಬಳಿ, ಹಾಸನ ತಾಲ್ಲೂಕು ಎಂದು ತಿಳಿಸಿದ್ದವನನ್ನು ದಸ್ತಗಿರಿ ಮಾಡಿಕೊಂಡು ಮಾರಾಟಕ್ಕಿಟ್ಟಿದ್ದ 2,073/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ, ಬಂಧಿತನಿಂದ 772/- ಬೆಲೆಯ ಮದ್ಯ ವಶ

ದಿನಾಂಕ: 16-04-2021 ರಂದು ಸಂಜೆ 04-30 ಗಂಟೆ ಸಮಯದಲ್ಲಿ  ಬೇಲೂರು ತಾಲ್ಲೂಕು, ಬಿಕ್ಕೋಡು  ಹೋಬಳಿ, ತಾರಿಮರ ಗ್ರಾಮದ ಬಸ್ ನಿಲ್ದಾಣದ ಪಕ್ಕದ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆಂದು ಪಿಎಸ್ಐ ಶ್ರೀ ಮಹೇಶ ಜೆ.ಇ. ಅರೇಹಳ್ಳಿ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಹಿಡಿದು ಹೆಸರು ವಿಳಾಸ ಕೇಳಲಾಗಿ  ಬಸವರಾಜು ಬಿನ್ ರಂಗಯ್ಯ, 35 ವರ್ಷ, ತಾರಿಮರ ಗ್ರಾಮ, ಬಿಕ್ಕೋಡು ಹೋಬಳಿ,  ಬೇಲೂರು ತಾಲ್ಲೂಕು ಎಂದು ತಿಳಿಸಿದವರನ್ನು ವಶಕ್ಕೆ ಪಡೆದುಕೊಂಡು  ಮದ್ಯ ಮಾರಾಟ ಮಾಡಲು ಇಟ್ಟುಕೊಂಡಿದ್ದ 772/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ಬೈಕ್ ಕಳವು:

ದಿನಾಂಕ: 08-04-2021 ರಂದು ಮಧ್ಯಾಹ್ನ 3-00 ಗಂಟೆ ಸಮಯದಲ್ಲಿ ಸಕಲೇಶಪುರ ಪಟ್ಟಣದ ಬಾಳೆಗದ್ದೆ ಬಡಾವಣೆ ವಾಸಿ ಶ್ರೀ ಹರೀಶ್, ರವರ ಬಾಬ್ತು ಕೆಎ-46, ಇ-9471 ರ ಬೈಕ್ನಲ್ಲಿ ಎಪಿಎಂಸಿ ಆರವಣದಲ್ಲಿ ಪಾಕರ್ಿಂಗ್ ಸ್ಥಳದಲ್ಲಿ ನಿಲ್ಲಿಸಿ, ತರಕಾರಿಯನ್ನು ತರಲೆಂದು ಸಂತೆಯೊಳಕ್ಕೆ ಹೋಗಿ ವಾಪಸ್ ಬಂದು ನೋಡಲಾಗಿ ಬೈಕ್ ಇರಲಿಲ್ಲ, ಯಾರೋ ಕಳ್ಳರು ಸುಮಾರು 20 ಸಾವಿರ ಬೆಲೆಯ ಬೈಕ್ನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಹಾಗೂ ಪತ್ತೆಮಾಡಿಕೊಡಬೇಕೆಂದು ಶ್ರೀ ಹರೀಶ್, ರವರು ದಿನಾಂಕ: 16-04-2021 ರಂದು ಕೊಟ್ಟ ದೂರಿನ ಮೇರೆಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತೆ.

No comments: